ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭಾ ಅಧಿವೇಶನದ 2ನೇ ದಿನವಾದ ಶುಕ್ರವಾರ ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲರ ಹೆಸರನ್ನು ಸೂಚಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಸರ್ವಾನುಮತದಿಂದ ಆಯ್ಕೆಯಾದರು.

