ಹಾಸನ : ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ರಿ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಸಹಯೋಗದೊಂದಿಗೆ ಆಲೂರು ವೀರಶೈವ ಸಮುದಾಯ ಭವನದಲ್ಲಿ ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಆಲೂರು ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಶ್ರೀ ಮಲ್ಲಿಕಾರ್ಜುನ್ ರವರು ದೀಪ ಬೆಳಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಗಾಂಧೀಜಿಯ ಕನಸಿನ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆ ಮಾಡುತ್ತಿದ್ದಾರೆಂದು ತಿಳಿಸಿ ಪಾನಮುಕ್ತರಾಗಿ ಬದುಕುತ್ತಿರುವ ನವಜೀವನ ಸಮಿತಿ ಸದಸ್ಯರಿಗೆ ಗುಲಾಬಿ ಹೂ ನೀಡಿ ಗೌರವಾರ್ಪಣೆ ಮಾಡಿದರು ಈ ಸಂದರ್ಭ ಜನಜಾಗೃತಿ ವೇದಿಕೆಯಿಂದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಅವರಿಗೆ ತಹಶೀಲ್ದಾರ್ ಮೂಲಕ ಹಕ್ಕುತ್ತಾಯ ಮಂಡನೆಯನ್ನು ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಶ್ರೀ ಮುಕೇಶ್ ರವರು ಠರವು ಓದಿ ಸರಕಾರಕ್ಕೆ ಮನವಿ ಒಪ್ಪಿಸಲಾಯಿತು.


ಮುಖ್ಯ ಅತಿಥಿಗಳಾಗಿ ಶ್ರೀ ಸಿದ್ದೇಶ್ ಕುಮಾರ್ ಸಹಾಯಕ ನಿರ್ದೇಶಕರು ತಾಲೂಕ್ ಪಂಚಾಯತ್ ಆಲೂರು ಇವರು ಯೋಜನೆ ಮೂಲಕ ಇಂತಹ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದು ಧನ್ಯವಾದ ಅರ್ಪಿಸಿದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಎಂ ಜಿ ಪರಮೇಶ್ ಮಡಬಲು, ಇವರು ನವಜೀವನ ಸಮಿತಿ ಸದಸ್ಯರಿಗೆ ದುಶ್ಚಟವನ್ನು ದೂರ ಮಾಡಿ ಪಾನಮುಕ್ತ ಬದುಕನ್ನು ನಡೆಸುವ ಕುರಿತು ಮಾಹಿತಿಯನ್ನು ತಿಳಿಸಿದರು ಇದರೊಂದಿಗೆ ಯೋಜನೆಯು ಮಾಡುತ್ತಿರುವ ಸಮಾಜಮುಖಿ ಸೇವೆಗಳನ್ನು ಕೊಂಡಾಡಿದರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಹಾಸನ ಜಿಲ್ಲೆಯ ನಿರ್ದೇಶಕರಾದ ಶ್ರೀ ಸುರೇಶ್ ಮೊಯಿಲಿ ಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಾಡುತ್ತಿರುವ ಸಮಾಜ ಸೇವೆ ಕೆಲಸಗಳನ್ನು ತಿಳಿಸುವುದರೊಂದಿಗೆ ಜನರು ಯೋಜನೆಯ ಕಾರ್ಯಕ್ರಮದ ದೇಯೋದ್ದೇಶಗಳನ್ನು ಅರ್ಥಮಾಡಿಕೊಳ್ಳಬೇಕೆಂದು ಕರೆ ನೀಡಿದರು ಕಾರ್ಯಕ್ರಮದಲ್ಲಿ ವೀರಶೈವ ಸಮುದಾಯದ ಅಧ್ಯಕ್ಷರು ಶ್ರೀ ರೇಣುಕ ಪ್ರಸಾದ್, ಆಲೂರು ಪೊಲೀಸ್ ಠಾಣೆಯ ಏ ಎಸ್ ಐ ದೇವರಾಜ್ ಹಾಸನ ಜಿಲ್ಲೆಯ ಜನಜಾಗೃತಿ ವೇದಿಕೆಯ ಸದಸ್ಯರಾದ ಮಲ್ಲಿಕಾರ್ಜುನ್, ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಈ ಸಂದರ್ಭ ಧರ್ಮರಾಜ್,ಬಾಲಕೃಷ್ಣ, ಮೋಹನ್, ರಾಜಶೇಖರ್ ರವರು ಉಪಸ್ಥಿತರಿದ್ದರು ಆಲೂರು ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಕೆ ರತ್ನಾಕರ ಕೊಠಾರಿ ಸ್ವಾಗತ ಮಾಡಿದರು ವಲಯದ ಮೇಲ್ವಿಚಾರಕರಾದ ಯಶೋಧ ರವರು ಧನ್ಯವಾದ ಮಾಡಿ ಮಗ್ಗೆ ವಲಯದ ಮೇಲ್ವಿಚಾರಕರಾದ ನಾಗರಾಜ್ ರವರು ನಿರೂಪಣೆ ಮಾಡಿದರು

Related Posts

Leave a Reply

Your email address will not be published.