ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ದೇವಸ್ಥಾನ, ದೈವಸ್ಥಾನಗಳ ಸಮಗ್ರ ಅಭಿವೃದ್ಧಿ: ಗಣೇಶ್ ಶೆಟ್ಟಿ 

ಕಳೆದ ಐದು ವರ್ಷಗಳ ಅವಧಿಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸುಮಾರು 28 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನ ಹರಿದು ಬಂದಿದ್ದು, ಮಂಗಳೂರು ನಗರದ ದಕ್ಷಿಣದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಕಟಿಬದ್ಧರಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಗಣೇಶ್ ಶೆಟ್ಟಿ ಹೇಳಿದರು.


ಅವರು ನಗರದ ಓಶಿಯನ್ ಪರ್ಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೇದವ್ಯಾಸ ಕಾಮತ್ ಶಾಸಕರಾಗಿ ಆಯ್ಕೆಯಾದ ಬಳಿಕ ನಗರದ ಪ್ರಮುಖ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ ಅದರಂತೆ ಹಲವು ಕ್ಷೇತ್ರಗಳ ಅಭಿವೃದ್ಧಿ ಮಾಡಿಸಿದ್ದಾರೆ. ಮುಖ್ಯವಾಗಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಪೂರಕವಾಗುವಂತೆ ಯೋಜನೆ ರೂಪಿಸಿ ಅನುದಾನ ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನಷ್ಟು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ನಿಟ್ಟಿನಲ್ಲಿ ಹತ್ತಾರು ಯೋಜನೆಗಳ ಅನುಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಭವಿಷ್ಯದಲ್ಲಿ ನಗರದ ಎಲ್ಲ ಧಾರ್ಮಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

Related Posts

Leave a Reply

Your email address will not be published.