ಬೆಳ್ತಂಗಡಿ : ಮಾಜಿ ಸಚಿವ ಗಂಗಾಧರ ಗೌಡರಿಗೆ ಸಂಬಂಧಿಸಿದ ಮೂರು ಸ್ಥಳಗಳಿಗೆ ಐಟಿ ದಾಳಿ
ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಗಂಗಾಧರ ಗೌಡವರವರ ಮೂರು ಸ್ಥಳಗಳಿಗೆ ಏ.24 ರಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿದಲ್ಲಿರುವ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ಬಂದು ದಾಳಿ ಮಾಡಿದ್ದು. ಪರಿಶೀಲನೆ ಮುಂದುವರಿದಿದೆ.