ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಅವರ ಸೋಮವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಗೀತಾರ ಪತಿ ನಟ ಶಿವರಾಜಕುಮಾರ್, ಮಾಜೀ ಮಂತ್ರಿ ಕಿಮ್ಮನೆ ರತ್ನಾಕರ್, ಮಂಜುನಾಥ ಭಂಡಾರಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಅಭಿಮಾನಿಗಳು ಶಿವಣ್ಣ ಶಿವಣ್ಣ ಎಂದು ಹೊರಗೆ ಜಮಾಯಿಸಿದ್ದರು.
ಅನಂತರ ರಾಮಣ್ಣ ಶ್ರೇಷ್ಟಿ ಉದ್ಯಾನದಲ್ಲಿ ಮೆರವಣಿಗೆ ಮತ್ತು ಕೊನೆಯಲ್ಲಿ ಸಭೆ ನಡೆಯಿತು. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.
