ಡಾ.ರವಿ ಕಕ್ಕೆ ಪದವು ಸುಪುತ್ರ ಗಣೇಶ್ ಸುಬ್ರಹ್ಮಣ್ಯ ರವರಿಗೆ ವೈಟ್ ಲಿಫ್ಟಿಂಗ್ ನಲ್ಲಿ ಗೋಲ್ಡನ್ ಮೆಡಲ್
ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಯಿಂದ ಸನ್ಮಾನ ಸುಬ್ರಹ್ಮಣ್ಯ.ಸುಳ್ಯದಲ್ಲಿ ಮೂರು ದಿನಗಳ ಕಾಲ ನಡೆದ ವೈಟ್ ಲಿಫ್ಟಿಂಗ್ ನಲ್ಲಿ ರವಿ ಕಕ್ಕೆಪದವು ಅವರ ಸುಪುತ್ರ ಗಣೇಶ್ ಸುಬ್ರಹ್ಮಣ್ಯ ಅವರು ಎರಡು ಗೋಲ್ಡನ್ ಮಡೆಲ್ ಪಡೆದಿದ್ದಾರೆ.ಈ ಹಿನ್ನೆಲೆಯಲ್ಲಿ ನ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗಣೇಶ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಇದೇ ಸಂದರ್ಭ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿನಯ್ ಗೂರೂಜಿ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರುಗಳು ಗಣೇಶ್ ರವರಿಗೆ ಶುಭಹಾರೈಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


















