ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು ಎಂದು ಹೇಳಿದರು” .

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ ಮೆಲ್ವಿನ್ ಅನಿಲ್ ಲೋಬೊ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ,ಶ್ರೇಷ್ಠ ನಾಯಕರಾಗಲು ಗುರಿಯನ್ನು ಇಷ್ಟಪಟ್ಟು ಈಡೇರಿಸಲು ಪ್ರಯತ್ನಿಸಬೇಕು ಅಧಿಕಾರ ಬಲದಿಂದಲ್ಲ ಎಂದು ಹೇಳಿದರು. ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಉಪಪ್ರಾಂಶುಪಾಲೆ ಲಾರೆಲ್ ಡಿ’ಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಉಸ್ತುವಾರಿ ಶ್ರೀಮತಿ ಪ್ರೀತನ್ ಪಿರೇರಾ ಸ್ವಾಗತಿಸಿದರೆ, ಶ್ರೀಮತಿ ಜಿಶಾ ವಿ ಥಾಮಸ್ ಧನ್ಯವಾದವನ್ನಿತ್ತರು. ಶ್ರೀಮತಿ ವಿದ್ಯಾ ಏಸ್ತರ್ ಮತ್ತು ಶ್ರೀಮತಿ ಸಂಧ್ಯಾ ಮನೋಜ್ ಕಾರ್ಯಕ್ರಮ ನಿರೂಪಿಸಿದರು.