ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಸರಕಾರಿ ರಜೆ ಘೋಷಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಗುರುವಾರ ಸಿ ಎಂ ಅವರನ್ನು ಭೇಟಿ ಮಾಡಿದ ಶಾಸಕರು ದ ಕ ,ಉಡುಪಿ ಸೇರಿದಂತೆ ರಾಜ್ಯಾಧ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಆದರದಿಂದ ಆಚರಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತದೆ. ಈ ದಿನದಂದು ಸರಕಾರಿ ರಜಾದಿನ ಘೋಷಣೆ ಮಾಡಿದರೆ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಶಾಲಾ ಮಕ್ಕಳು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕಾರಣ ಆ ದಿನದ ಗೌರವ ಪರಿಗಣಿಸಿ ಸರಕಾರಿ ರಜಾ ಘೋಷಣೆ ಮಾಡುವಂತೆ ಶಾಸಕರು ಮನವಿ ಮಾಡಿದ್ದಾರೆ.
ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ
RELATED ARTICLES

