ಹತ್ತು ಸಾವಿರ ಮನೆಗಳ ಪೈಕಿ ಒಂದೂ ಮತ್ಸ್ಯಾಶ್ರಯ ಮನೆ ಹಂಚಿಕೆಯಾಗಿಲ್ಲ, ಗಂಟಿಹೊಳೆ ಪ್ರಶ್ನೆಗೆ ಸರ್ಕಾರದ ಉತ್ತರ

ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24 ನೇ ಸಾಲಿನಲ್ಲಿ ಮತ್ಸ್ಯಾಶ್ರಯ ವಸತಿ ಯೋಜನೆಯಡಿಯಲ್ಲಿ ಯಾವುದೇ ಮನೆಗಳು ಮಂಜೂರಾಗಿರುವುದಿಲ್ಲ. 2024- 25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲು ಸಹಾಯ ನೀಡಲಾಗುವುದೆಂದು ಘೋಷಿಸಲಾಗಿದೆ. 2025 ರ ಫೆಬ್ರವರಿವರೆಗೆ ಯಾವುದೇ ಮನೆಗಳನ್ನು ಹಂಚಿಕೆ ಮಾಡಿರುವುದಿಲ್ಲ ಎಂದು ಉತ್ತರಿಸಿದ್ದಾರೆ.

add - BDG

Related Posts

Leave a Reply

Your email address will not be published.