ಬದಿಯಡ್ಕದಲ್ಲಿ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ

ಕಾಸರಗೋಡು ಜು 22: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು.

ಕೊಂಕಣಿ ಸಾಹಿತಿ, ಭಾಷಾ ತಜ್ನ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ ಶಂಕರ ಗ್ರಾಮಲೋಕ ಕಾರ್ಯಕ್ರಮಕ್ಕಾಗಿ ಬದಿಯಡ್ಕ ಎಂಬ ಸಣ್ಣ ಗ್ರಾಮವನ್ನು ಆಯ್ಕೆ ಮಾಡಿದಕ್ಕಾಗಿ ಅಕಾಡೆಮಿ ಆಡಳಿತಕ್ಕೆ ಕೃತಜ್ನತೆಗಳನ್ನು ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಯುವಸಾಹಿತಿಗಳಾದ ವೆಂಕಟೇಶ್ ನಾಯಕ್, ಶ್ವೇತಾ ಪೈ ಮಂಜೇಶ್ವರ, ರೋಶನ್ ಪೆರಿಯಡ್ಕ ಕವಿತೆಗಳನ್ನು ಓದಿದರೆ ಸ್ಟ್ಯಾನಿ ಬೇಳ ಸಣ್ಣ ಕಥೆಯನ್ನು ಪ್ರಸ್ತುತಪಡಿಸಿದರು.

Related Posts

Leave a Reply

Your email address will not be published.