HomeFresh Newsಹೆಜಮಾಡಿ ಅಂಗನವಾಡಿ ಕೇಂದ್ರಕ್ಕೆ ಗೋಡೆ ಬರಹದ ಸಹಾಯಧನ ಹಸ್ತಾಂತರ

ಹೆಜಮಾಡಿ ಅಂಗನವಾಡಿ ಕೇಂದ್ರಕ್ಕೆ ಗೋಡೆ ಬರಹದ ಸಹಾಯಧನ ಹಸ್ತಾಂತರ

ಪಡುಬಿದ್ರಿ: 73ನೇ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ ವತಿಯಿಂದ ಹೆಜಮಾಡಿ ಕೇಂದ್ರದ ಅಂಗನವಾಡಿಗೆ ಗೋಡೆ ಬರಹಕ್ಕಾಗಿ ಸಹಾಯಧನ ಹಸ್ತಾಂತರ ಕಾರ್ಯಕ್ರಮ ನ. 19ರಂದು ನಡೆಯಿತು.
ಸೊಸೈಟಿ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ವಾಮನ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸಹಾಯಧನ ಹಸ್ತಾಂತರದ ಬಳಿಕ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸೊಸೈಟಿ ವತಿಯಿಂದ ಬಣ್ಣದ ಬಳಪಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರ ರತ್ನ 2026 ಪ್ರಶಸ್ತಿ ಪುರಸ್ಕೃತ ವೈ. ಸುಧೀರ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ನಿರ್ದೇಶಕರಾದ ರಸೂಲ್ ವೈ.ಜಿ., ಶಿವರಾಮ್ ಎನ್. ಶೆಟ್ಟಿ, ರಾಜಾರಾಮ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್., ಸಹಾಯಕ ಕಾರ್ಯನಿರ್ವಹಣಾಧಿಕಾರಿ ದೀಪಕ್ ಸಾಲ್ಯಾನ್, ಸಿಬ್ಬಂದಿ ವರ್ಗ, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮೋಹನ್ ಸುವರ್ಣ, ಅಂಗನವಾಡಿ ಕಟ್ಟಡದ ಗುತ್ತಿಗೆದಾರರಾದ ಭರತ್ ಮತ್ತು ಶೈಲೇಶ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಅಶ್ವಿನಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments