ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಮಾರ್ಗದರ್ಶನ ಶಿಬಿರ

ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು.

ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್ ರಾಯನ್ ಕ್ರಾಸ್ತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು.
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಗೋವಿಂದ ಪ್ರಸಾದ್ ಹತ್ತನೇ ತರಗತಿ ನಂತರ ಯಾವ ವಿಭಾಗ ಸೂಕ್ತ ಹಾಗೂ ವೃತ್ತಿ ಮಾರ್ಗದರ್ಶನವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸಂಚಾಲಕರಾದ ವಂಟ ಪ್ರಕಾಶ್ ಪೌಲ್ ಡಿಸೋಜ ವಿದ್ಯಾರ್ಥಿಗಳಿಗೆ ಓದಿನ ಕಡೆ ಹೆಚ್ಚಿನ ಆಸಕ್ತಿ ವಹಿಸುವಂತೆ ಹಾಗೂ ಶ್ರಮವಹಿಸಿ ಉತ್ತಮ ಅಂಕಗಳಿಸುವಂತೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದು, ಸಂವಾದವನ್ನು ನಡೆಸಲಾಯಿತು. ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗಿರಿಧರ್ ರೈ ಮಕ್ಕಳಿಗೆ ಶುಭ ಹಾರೈಸಿದರು. ಸೈಂಟ್ ಆನ್ಸ್ ಮತ್ತು ಸೈಂಟ್ ಜೋಕಿಮ್ಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

ಶಾಲೆಯ ಪ್ರಾಂಶುಪಾಲರಾದ ವಂಟ ಅಮಿತ್ ಪ್ರಕಾಶ್ ರೋಡ್ರಿಗಸ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶಾಂತಿಪ್ರಿಯಾ ಕಾರ್ಯಕ್ರಮವನ್ನು ನಿರೂಪಿಸಿದರು.

add - BDG

Related Posts

Leave a Reply

Your email address will not be published.