ದುಬೈ ಸೇರಿ ಗಲ್ಫ್ ದೇಶಗಳಲ್ಲಿನ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ
ದುಬೈ: ಇರಾನ್, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ.
ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ, ಮನೆಯಲ್ಲಿಯೇ ಜಾಗರೂಕತೆಯಿಂದ ಇರಬೇಕು ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.
ಜೋರ್ಡನ್‌ನಲ್ಲಿರುವ ಭಾರತೀಯ ಪ್ರವಾಸಿಗರು ವಾಣಿಜ್ಯ ವಿಮಾನಗಳ ಸಂಚಾರ ಸ್ಥಗಿತಗೊಳ್ಳುವ ಮುನ್ನ ದೇಶವನ್ನು ತೊರೆಯುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇಯು ಮಾರ್ಗಸೂಚಿಯಲ್ಲಿ ತಿಳಿಸಿದೆ.


















