ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಸಂಚಲನ

ಬಹುನಿರೀಕ್ಷಿತ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗಡಿನಾಡು ಗುಂಡ್ಲುಪೇಟೆ ಪಟ್ಟಣದಿಂದ ಆರಂಭವಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ರಾಜ್ಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಗುಂಡ್ಲುಪೇಟೆಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಇಡೀ ರಾಜ್ಯಮಟ್ಟದ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 40 ಸಾವಿರಕ್ಕು ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಈ ಸಮಯದಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಗುಂಡ್ಲುಪೇಟೆಯಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆ, ಇವತ್ತು ತಾಲೂಕಿನ ಬೇಗೂರಿನಲ್ಲಿ ಉಳಿದುಕೊಳ್ಳಲ್ಲಿದ್ದು, ಮತ್ತೇ ನಾಳೆ ಮೈಸೂರಿನ ಕಡೆ ಪಾದಯಾತ್ರೆ ನಡೆಸಲಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 22 ದಿನಗಳ ಭಾರತ್ ಜೋಡೋ ಪಾದಯಾತ್ರೆ ನಡೆಯಲಿದೆ…