ಮೂಲ್ಕಿ: ನಗರೋತ್ಥಾನ ಯೋಜನೆಯಡಿ ಕಚೇರಿ ಕಟ್ಟಡ ಶಂಕುಸ್ಥಾಪನೆ
ಮುಲ್ಕಿ ನಗರೋತ್ಧಾನ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ವಿಶೇಷ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ನೂತನ ಕಛೇರಿ ಕಟ್ಟಡದ ಶಂಕುಸ್ದಾಪನೆ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ. ಸಚಿವ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು. ಈ ಸಂದರ್ಭ ಮಾತನಾಡಿ, ಸರಕಾರವು ರಾಜ್ಯದಲ್ಲಿ ಶಿಸ್ತು ಬದ್ದ ಹಾಗೂ ಪಾರದರ್ಶಕ ಆಡಳಿತದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಅನೇಕ ಯೋಜನೆಗಳನ್ನು ತಯಾರಿಸಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು. ಈ ಸಂದರ್ಭ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮುಲ್ಕಿ ತಹಶೀಲ್ದಾರ್ ಪ್ರದೀಪ್, ಮಾಜಿ ಸಚಿವ ಅಭಯ್ ಚಂದ್ರ ಜೈನ್, ಯವ ಕಾಂಗ್ರೆಸ್ ನಾಯಕ ಮಿಥುನ್ ರೈ ಮೊದಲಾದವರು ಪಾಲ್ಗೊಂಡಿದ್ದರು.