ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಚ್.ಡಿ. ರೇವಣ್ಣ ಭೇಟಿ

ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ ಅವರು ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ತಾನು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಭಕ್ತ. ಸದಾ ಸ್ವಾಮಿಯ ದರ್ಶನಕ್ಕೆ ಬರುತ್ತಿರುತ್ತೇನೆ. ಆದ್ದರಿಂದ ಇಂದೂ ಕೂಡಾ ಬಂದಿದ್ದೇನೆ. ಕಳೆದ 40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. 25 ವರ್ಷಗಳ ಕಾಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ. ದೇವರ ಬಗ್ಗೆಯೂ ನಂಬಿಕೆಯಿದೆ ಇದೆ ಎಂದರು.

Related Posts

Leave a Reply

Your email address will not be published.