ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶಿತ ಹಿರಿಯ ನ್ಯಾಯಾವಾದಿ ತಾರಾನಾಥ ಪೂಜಾರಿ, ಮಹಾಮಂಡಲದ ಕಾರ್ಯದರ್ಶಿ ಗಂಗಾಧರ ಪೂಜಾರಿ ಚೇಲಾರ್,ಪ್ರಭಾಕರ್ ಬಂಗೇರ,ಬಿ ಎನ್ ಶಂಕರ್ ಪೂಜಾರಿ,ಗಣೇಶ್ ಪೂಜಾರಿ,ಶಿವಾಜಿ ಸುವರ್ಣ,ಇರುವೈಲು ಸಂಘದ ಕಾರ್ಯದರ್ಶಿ ದಿನೇಶ್ ಕೆ,ಕೋಶಾಧಿಕಾರಿ ರಜನಿಕಾಂತ್,ಮಹಾಮಂಡಲದ ಪದಾದಿಕಾರಿಗಳು ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು.