ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕರ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

  • ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಗುರುವಾರ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದ್ದು, ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು. ತನ್ನ ಕಾರು ಬದಲಾಗಿ ಶಾಸಕರು ತಮ್ಮ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಡೀಲ್‌ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿ ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

Related Posts

Leave a Reply

Your email address will not be published.