ಹಾಸನ: ಸೆ.25 ರಂದು “ಜನತಾ ದರ್ಶನ” ಕಾರ್ಯಕ್ರಮ
“ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ.
ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ” ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ರಾಜ್ಯದ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸೆ.25 ರಂದು ಏಕಕಾಲದಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರ ಅಹವಾಲನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವಂತೆ ಆದೇಶಿಸಲಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಟಿ. ಶಾಂತಲಾ ಉಪಸ್ಥಿತರಿದ್ದರು.