ಕಾವೇರಿ ನೀರು ವಿವಾದ – ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲೂ ಕನ್ನಡ ಪರ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿದ ಘಟನೆಯೂ ನಡೆಯಿತು. ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.