ಹಾಸನದಲ್ಲಿ ಡಿ.6 ರಂದು ಮುಖ್ಯಮಂತ್ರಿಗಳಿಂದ ತಾಲೂಕಿನ 3272 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಮುಖ್ಯಮಂತ್ರಿ ,ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಇಲಾಖೆ ಸಚಿವರು ಭಾಗಿಆಲೂರು :ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶ ಡಿ.6 ರಂದು ಹಾಸನ ನಗರದಲ್ಲಿ ಜರುಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಇಲಾಖೆ ಸಚಿವರುಭಾಗವಹಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್. ಮಲ್ಲಿಕಾರ್ಜುನ್ ತಿಳಿಸಿದರು


ತಾಲೋಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಸುಮಾರು 3 ಗಂಟೆ ವೇಳೆಗೆ ಮುಕ್ತಾಯಗೊಳ್ಳಲಿದೆ.ಅಲ್ಲದೆ ಕಂದಾಯ,ತೋಟಗಾರಿಕೆ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 3272 ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೇವೆಗಳಾದ 94 ಸಿ,94 ಸಿಸಿ, ಹಕ್ಕುಪತ್ರ, ಬಗರ್ ಹುಕುಂ ಸಾಗುವಳಿಚೀಟಿ,ದುರಸ್ಥಿ, ಪೋಡಿ, ಪೌತಿ ಖಾತೆ, ಕೃಷಿ ಸಂಜೀವಿನಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಯನ್ನು ಮಾನ್ಯ ಮುಖ್ಯಮಂತ್ರಿಗಳೇ ಖುದ್ದು ಸೌಲಭ್ಯಗಳನ್ನು ವಿತರಿಸುತ್ತಾರೆ ಎಂದರು


ಈ ಕಾರ್ಯಕ್ರಮಕ್ಕೆ ತಾಲೂಕಿನಿಂದ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಸಾರಿಗೆ ವ್ಯವಸ್ಥೆಯನ್ನ ಕಲ್ಪಿಸಲಾಗಿದ್ದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಇರುವ ಫಲಾನುಭವಿಗಳನ್ನು ಗುರುತಿಸಿ 61 ಬಸ್ಸುಗಳ ಮೂಲಕ ನೋಡಲ್ ಅಧಿಕಾರಿಗಳಾದ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಗ್ರಾಮ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆಯನ್ನು ಮಾಡಲಾಗಿದೆ

ಫಲಾನುಭವಿಗಳಿಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕೂಡ ಸರ್ಕಾರದ ವತಿಯಿಂದಲೇ ವ್ಯವಸ್ಥೆ ಮಾಡಲಾಗಿದೆ ಆದುದರಿಂದ ಫಲಾನುಭವಿಗಳು ಸರ್ಕಾರದ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಅಂಕೇಗೌಡ ಉಪಸ್ಥಿತರಿದ್ದರು

Related Posts

Leave a Reply

Your email address will not be published.