Header Ads
Breaking News

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯ ಶಾಸಕರು ಸಹಕರಿಸಿ: ಸಚಿವ ಗೋಪಾಲಯ್ಯ

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರ ಸಹಕಾರವನ್ನು ಕೋರುತ್ತೇನೆ ಎಂದು ಸಚಿವ ಗೋಪಾಲಯ್ಯ ಹೇಳಿದರು.

ಅವರು ಅರಕಲಗೂಡು ತಾಲ್ಲೂಕಿನಲ್ಲಿ ಕೋವಿಡ್ ಸಂಬಂಧ ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೊ ಭೇಟಿ ನೀಡಿ ಸಭೆ ನಡೆಸಿ ಅಲ್ಲಿನ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತೇನೆ ಕಳೆದ ವರ್ಷ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ವಹಿಸಿಕೊಂಡಿದ್ದು ಈ ಬಾರಿಯೂ ಸಹ ಯಾರೂ ಹೋಂ ಐಸೊಲೇಷನ್ ನಲ್ಲಿ ಇದ್ದಾರೋ ಅದರಲ್ಲಿ ಅನುಕೂಲ ಇರುವವರನ್ನು ಬಿಟ್ಟು ಉಳಿದವರನ್ನು ಕೋವಿಡ್ ಕೇರ್ ಸೆಂಟರ್ ನಲ್ಲೇ ಚಿಕಿತ್ಸೆಗಾಗಿ ದಾಖಲು ಮಾಡಲು ಸೂಚಿಸಲಾಗಿದೆ. ಒಳ್ಳೆಯ ಊಟ ತಿಂಡಿ ವ್ಯವಸ್ಥೆ ಮಾಡಿ ಅವರುಗಳಿಗೆ ಅಲ್ಲಿಯೇ ಆಕ್ಸಿಜನ್ ವ್ಯವಸ್ಥೆ ಮಾಡಬೇಕು ಹಾಗೂ ವೈದ್ಯರುಗಳು ಪ್ರತಿದಿನ ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಿ ಅವರಿಗೆ ಧೈರ್ಯವನ್ನು ತುಂಬುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

 

Related posts

Leave a Reply

Your email address will not be published. Required fields are marked *