HomeFresh Newsಹಾಸನ:ಜಿಲ್ಲಾ ನ್ಯಾಯಾಲಯದ ಎದುರು ರೌಡಿಶೀಟರ್ ಬರ್ಬರ ಹತ್ಯೆ

ಹಾಸನ:ಜಿಲ್ಲಾ ನ್ಯಾಯಾಲಯದ ಎದುರು ರೌಡಿಶೀಟರ್ ಬರ್ಬರ ಹತ್ಯೆ

ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮಂಜೇಶ್ (43) ಎಂದು ಗುರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯವರಾದ ಮಂಜೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಅಲ್ಲಿ ರೌಡಿಶೀಟರ್ ಆಗಿದ್ದ ಎಂದು ತಿಳಿದುಬಂದಿದೆ.‌

ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದೆ. ಹಂತಕರು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯಿಂದಾಗಿ ನ್ಯಾಯಾಲಯದ ಸುತ್ತಮುತ್ತ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಘಟನೆ ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments