ಬೆಳ್ಳೆ ಗ್ರಾಮ ಪಂಚಾಯತ್ ಸಂತೃಪ್ತಿ ನಗರದಲ್ಲಿ “ಹೈ- ಮಾಸ್ಟ್ ದೀಪ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ
ಕಾಪು:ಬೆಳ್ಳೆ ಗ್ರಾಮ ಪಂಚಾಯತ್ ಮತ್ತು ಹೃದಯಂ ಫೌಂಡೇಶನ್ ಸಹಯೋಗದೊಂದಿಗೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೃಪ್ತಿ ನಗರದ ಬಳಿ ಅಳವಡಿಸಲಾದ “ಹೈ- ಮಾಸ್ಟ್ ದೀಪದ ಎಂದರು ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.
ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಹೈ ಮಾಸ್ಟ್ ದೀಪದವನ್ನು ಕೊಡಮಾಡಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ, ಹೃದಯಂ ಫೌಂಡೇಶನ್ ಪ್ರವರ್ತಕರಾದ ಸುಭಾಷ್ ಎಂ ಸಾಲಿಯಾನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಆಶಲತಾ ಹಾಗೂ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

















