65 ಲಕ್ಷ ರೂಪಾಯಿ ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ
ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಸದಸ್ಯರಾದ ಜೀಯಾನಂದ ಹೆಗಡೆ, ಸತೀಶ್ ಶೆಟ್ಟಿ, ಸುಮಿತಾ ಹಾಗೂ ಸತೀಶ್ ಶೆಟ್ಟಿ, ಶಿವರಾಮ್ ಶೆಟ್ಟಿ, ರೋಹಿತ್ ಶೆಟ್ಟಿ, ರಾಧಾಕೃಷ್ಣ ನಾಯಕ್, ಲಕ್ಷ್ಮೀ ನಾರಾಯಣ ಭಟ್, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಕುಕ್ಕೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಅರ್ಚನಾ ಹೆಗ್ಡೆ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಮನಾ, ಹಾಗೂ ಗುತ್ತಿಗೆದಾರರು ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.


















