ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ

ದಿನಾಂಕ : 26-07-2022 ನೇ ಮಂಗಳವಾರದಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಛೇರಿ ಇಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, 23 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ ಪ್ರಾಣವನ್ನೇ ತ್ತೆತ ಸೈನಿಕರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ, ಆ ಸಮಯದಲ್ಲಿ ಪ್ರಧಾನಿಯಾಗಿದ್ದ ವಾಜಿಪೇಯಿಯವರು ಶಾಂತಿ ಸಂಧಾನಕ್ಕೆ ಪ್ರಯತ್ನಿಸುತ್ತಿರುವ ಸಮಯದಲ್ಲಿ ಪಾಪಿ ಪಾಕಿಸ್ತಾನ ಕಾರ್ಗಿಲ್ ಪ್ರದೇಶಕ್ಕೆ ಮೋಸದಿಂದ ಸೈನಿಕರನ್ನು ಕಳುಹಿಸಿ ಆಕ್ರಮಣ ಮಾಡಿದರು.

ಮೇ 5 ರಂದು ಕಾರ್ಗಿಲ್ ಯುದ್ಧ ಆರಂಭವಾಗಿ ಜುಲೈ 26 ರಂದು ಕೊನೆಗೊಂಡಿರುತ್ತದೆ, ಒಟ್ಟು 74 ದಿನಗಳ ಕಾರ್ಗಿಲ್ ಕದನದಲ್ಲಿ ಭಾರತದ 2,00,000 ಸೈನಿಕರು ದೇಶಕ್ಕಾಗಿ ಕೆಚ್ಚೆದೆಯಿಂದ ಹೋರಾಡಿದರು. ಸುಮಾರು 500 ಕ್ಕೂ ಹೆಚ್ಚು ಸೈನಿಕರು ದೇಶಕ್ಕಾಗಿ ತಮ್ಮನೇ ಬಲಿದಾನ ಮಾಡಿ ಹುತಾತ್ಮರಾದರೂ. ಆಪರೇಷನ್ ವಿಜಯ್ ಮುಖಾಂತರ ಭಾರತ ಸೇನೆ ಪಾಕಿಸ್ತಾನವನ್ನು ಬಗ್ಗು ಬಡಿದ ಸವಿ ನೆನಪಿಗಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಎಂದು ದೇಶದೆಲ್ಲೆಡೆ ಆಚರಿಸಿ ದೇಶಕ್ಕೆ ಬಲಿದಾನ ಮಾಡಿದ ಸೈನಿಕರನ್ನು ಸ್ಮರಿಸುತ್ತಾ, ನಾವು ನಮ್ಮನ್ನು ದೇಶ ಸೇವೆಗಾಗಿ ಪುನರ್ ಸಮರ್ಪಿಸುವ ವಿಶೇಷ ದಿನ ಎಂದು ಅಭಿಪ್ರಾಯಪಟ್ಟರು ಹಾಗೂ ಹುತಾತ್ಮರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವೆಲ್ಲ ಹಾರೈಸೋಣ ಎಂದು ನುಡಿದರು. ಈ ಸಂಧರ್ಭದಲ್ಲಿ ಕಛೇರಿ ಅಧೀಕ್ಷಕರಾದ ಶ್ರೀ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ. ಎಸ್, ಮಂಗಳೂರು ಘಟಕದ ಘಟಕಾಧಿಕಾರಿ ಶ್ರೀ ಮಾರ್ಕ್ ಶೇರಾ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.