HomeFresh Newsಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ...

ಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಗೃಹ ಸಚಿವರು

ಸರ್ಕಾರಿ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘದ ಪದಾಧಿಕಾರಿಗಳು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಗೃಹರಕ್ಷಕ ದಳ ಸಿಬ್ಬಂದಿಗಳ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗ್ಗೆ ಸಚಿವರಿಗೆ ತಿಳಿಸಿ, ಮುಂಬರುವ ಅಧಿವೇಶನದಲ್ಲಿ ಸಿಬ್ಬಂದಿಗಳ ಕೊರತೆಗಳನ್ನು ಚರ್ಚಿಸಿ ನ್ಯಾಯಯುಕ್ತವಾದ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿಕೊಂಡಿದ್ದಾರೆ. ಮನವಿ ಸ್ವೀಕರಿಸಿದ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೇಶವ ಯಸ್ ಪುತ್ತೂರು, ಸಂಘಟನಾ ಕಾರ್ಯದರ್ಶಿ ಚೇತನ್ ಎಂ ಖಜಾಂಜಿ ಸತೀಶ್ ವಿಟ್ಲ ಮತ್ತು ಉಷಾ, ಮಾಧ್ಯಮ ಪ್ರತಿನಿಧಿಯಾಗಿ ಹರೀಶ್ ಪುತ್ತೂರು ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಗಳು ಸರ್ವ ಸದಸ್ಯರು ಉಪಸ್ಥಿತಿಯಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments