HomeFresh Newsರೋಹನ್ ಮೊಂತೆರೋ, ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ...

ರೋಹನ್ ಮೊಂತೆರೋ, ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.

ಮಾ. 29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ.ಧರ್ಮ ತಿಳಿಸಿದ್ದಾರೆ. ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.

ಈ ಘಟಿಕೋತ್ಸವಕ್ಕೆ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘ ಉಪಾಧ್ಯಕ್ಷರು ಹಾಗೂ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ವಿ.ಎನ್.ರಾಜಶೇಖರನ್ ಪಿಳ್ಳೆ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿರುವರು. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ಗೌರವಾನ್ವಿತ ಥಾವರ್ ಚಂದ್ ಗೆಹೋಟ್ ಇವರು ಈ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ.

ಈ ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 64 (ಕಲಾ ನಿಕಾಯ-12, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-38, ವಾಣಿಜ್ಯ ನಿಕಾಯ – 11, ಶಿಕ್ಷಣ ನಿಕಾಯ – 03) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ (ಪಿಹೆಚ್.ಡಿ) ಪಡೆಯಲಿದ್ದಾರೆ.

ಇವರಲ್ಲಿ 31 (48.43%) ಪುರುಷರು ಮತ್ತು 33 (51.56%) ಮಹಿಳೆಯರು ಹಾಗೂ 3 (ಪುರುಷ-02, ಮಹಿಳೆ-01) ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿರುವರು.

54 ಚಿನ್ನದ ಪದಕ ಮತ್ತು 56 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 127 ರಾಂಕ್‌ ಗಳಲ್ಲಿ ಪುಥಮ ರ್ಯಾಂಕ್‌ ಪಡೆದ 67 (ಸ್ನಾತಕೋತ್ತರ ಪದವಿ- 49 ಮತ್ತು ಪದವಿ-18) ವಿದ್ಯಾರ್ಥಿಗಳಿಗೆ ರ್ಯಾಂಕ್‌ ಪ್ರಮಾಣ ಪತ್ರವನ್ನು ನೀಡಲಾಗುವುದು. ಇದರಲ್ಲಿ ಕಲಾ ನಿಕಾಯದ-18, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ- 39, ವಾಣಿಜ್ಯ ನಿಕಾಯದ -08, ಶಿಕ್ಷಣ ನಿಕಾಯದ -02 ವಿದ್ಯಾರ್ಥಿಗಳಿದ್ದಾರೆ ಎಂದು ಕುಲಪತಿ ವಿವರ ನೀಡಿದರು.

ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಒಟ್ಟು 25387 ವಿದ್ಯಾರ್ಥಿಗಳು ಹಾಜರಾಗಿದ್ದು 18723(73.75%) ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಸ್ನಾತಕೋತ್ತರ/ಸ್ನಾತಕ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ 18723 ವಿದ್ಯಾರ್ಥಿಗಳಲ್ಲಿ 6896(36.83%) ಹುಡುಗರು ಹಾಗೂ 11826 (63.16%) ಹುಡುಗಿಯರು ಆಗಿರುತ್ತಾರೆ.

ಸ್ನಾತಕೋತ್ತರ ಪದವಿ ಪರೀಕ್ಷೆಗೆ ಒಟ್ಟು 3331 ವಿದ್ಯಾರ್ಥಿಗಳು ಹಾಜರಾಗಿದ್ದು 3152(94.63%) ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಸ್ನಾತಕ ಪದವಿ ಪರೀಕ್ಷೆಗೆ ಒಟ್ಟು 22056 ವಿದಾರ್ಥಿಗಳು ಹಾಜರಾಗಿದ್ದು 15571 (70.60%)ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ 3152 ವಿದಾರ್ಥಿಗಳಲ್ಲಿ 906 ಹುಡುಗರು ಮತ್ತು 2245 ಹುಡುಗಿಯರು ಹಾಗೂ 01 ತೃತೀಯ ಲಿಂಗ ಆಗಿರುತ್ತಾರೆ. ಸ್ನಾತಕ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 15571 ವಿದ್ಯಾರ್ಥಿಗಳಲ್ಲಿ 5990 ಹುಡುಗರು ಮತ್ತು 9581 ಹುಡುಗಿಯರು ಆಗಿರುತ್ತಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವರಾದ ರಾಜು ಮೊಗವೀರ , ಪ್ರೊ.ದೇವೇಂದ್ರಪ್ಪ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments