ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕಳವು ಪ್ರಕರಣ : ಇನ್ನೋರ್ವ ಆರೋಪಿಯ ಸೆರೆ

ಮಂಗಳೂರು :ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.

ದಿನಾಂಕ: 15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.

ಈ ಪ್ರಕರಣದಲ್ಲಿ ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿ ಎ ಹೆಗಡೆ ನೇತ್ರತ್ವದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ರೂ. 56,50,000/-ಚಿನ್ನಾಭರಣಗಳು, ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಳವು ಮಾಡಿದ ಮನೆಯನ್ನು ತೋರಿಸಿಕೊಟ್ಟು ಕಳವಿನ ಸಹಕರಿಸಿದ ಆರೋಪಿಯಾದ ಮಹಮ್ಮದ್ ಶರೀಪ್(40), ವಾಸ: ತಾರಿ ಗುಡ್ಡೆ ಸೈಟ್ ಹೌಸ್, ಬೊಂಡತಿಲ ಪೋಸ್ಟ್ ಮತ್ತು ಗ್ರಾಮ ಮಂಗಳೂರು ತಾಲೂಕು ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ ಚಿನ್ನದ ಪೆಂಡೆಂಡ್ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Related Posts

Leave a Reply

Your email address will not be published.