HomeFresh Newsಅಕ್ರಮವಾಗಿ ಕೆಂಪು ಕಲ್ಲು ಸಾಗಾಟ:ಲಾರಿ ಸಹಿತ ಇಬ್ಬರು ಚಾಲಕರು ಪೊಲೀಸ್ ವಶಕ್ಕೆ

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ:ಲಾರಿ ಸಹಿತ ಇಬ್ಬರು ಚಾಲಕರು ಪೊಲೀಸ್ ವಶಕ್ಕೆ

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದಾಗ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಎರಡು ಲಾರಿಗಳು ನಿಲ್ಲಿಸಿ, ತಪಾಸಣೆ ನಡೆಸಿದಾಗ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಅಕ್ರಮ ಸಾಗಾಟ ಎಂಬುದು ಬೆಳಕಿಗೆ ಬಂದಿದೆ.

ಲಾರಿಗೆ ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಕಲ್ಲುಗಳನ್ನು ಜಾಫರ್ ಎಂಬುವರು ಮತ್ತು ಇನ್ನೊಂದು ಲಾರಿಯಲ್ಲಿ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ನಾಸೀರ್ ಎಂಬುವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ತಿಳಿಸಿರುತ್ತಾರೆ. ಲಾರಿಗಳನ್ನು ಹಾಗೂ ಚಾಲಕರುಗಳನ್ನು ವಶಕ್ಕೆ ಪಡೆದು, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 94/2025 ಕಲಂ: 303(2) ಬಿ ಎನ್ ಎಸ್ ಮತ್ತು 4(1) , 21 , MMRD act and U/s 3,44 KMMCR Act ರಂತೆ ಪ್ರಕರಣ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments