ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.
ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ ಘೋಷಣಾ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯರವರು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹೊಸ ಶಕೆಯನ್ನು ಆರಂಭ ಮಾಡಿದೆ. ಕಾರ್ಯಕರ್ತರಲ್ಲಿ ಹೊಸ ಉತ್ಸಾಹಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ಕಾರ್ಯಕರ್ತರು ಮುತುವರ್ಜಿ ವಹಿಸಬೇಕು. ನೂತನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಹಾಗೂ ಅರ್ಪಣಾ ಮನೋಭಾವದಿಂದ ನಿರ್ವಹಿಸಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ರಾಜೇಶ್. ಜಿ .ವಿ, ರಾಜ್ಯ, ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಸಕರಾದ ಯಶ್ ಪಾಲ ಸುವರ್ಣ, ರಾಜ್ಯ ಬಿಜೆಪಿ ಉಪಾಧ್ಯಕ್ಷರು ಮಾಜಿ ಸಚಿವರಾದ ಹರತಾಳು ಹಾಲಪ್ಪ, ಮಾಜಿ ಸಚಿವರಾದ ರೇಣುಕಾಚಾರ್ಯ ರಾಜ್ಯ ಉಪಾಧ್ಯಕ್ಷರಾದ ವಿವೇಕಾನಂದ ಡಬ್ಬಿ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಗೋವಿಂದ್ ರಾಜ್ ಓಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಸೋಮಶೇಖರ್ ರವರು ಉಪಸ್ಥಿತರಿದ್ದರು
.

Related Posts

Leave a Reply

Your email address will not be published.