ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ದಿನಾಂಕ 26 ರ ಶನಿವಾರದಂದು ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನು
ವಿದ್ವಾನ್ ಮಥೂರ್ ಬಾಲಸುಬ್ರಮಣ್ಯಮ್ ನಡೆಸಿಕೊಟ್ಟರು.

ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ
ವಿದ್ವಾನ್ ಮಥೂರ್ ಬಾಲಸುಬ್ರಮಣ್ಯಮ್ ಅವರು ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ್ಳಿ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ವ್ಯಕ್ತಿಯ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಪಸ್ಥಿತರಿದ್ದ ಕಾಂತರಾ ಸಿನಿಮಾದ ಕಮಲಕ್ಕನ ಪಾತ್ರ ನಿರ್ವಹಿಸಿದ ಶ್ರೀಮತಿ ಮಾನಸಿ ಸುಧೀರ್ ರವರು ಮಾತನಾಡಿ ಇಂತಹ ಸ್ಪರ್ಧೆಗಳು ನಡೆಯುತ್ತಿದ್ದರೆ ವಿದ್ಯಾರ್ಥಿಗಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮೀ ಕೃಷ್ಣಪ್ರಸಾದ್ ರವರು ಓದಿನ ಜೊತೆಗೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಲ್ಲಿ ಭಾಗವಸಬೇಕು, ಆ ಮೂಲಕ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ಎಂದರು.

ವೇದಿಕೆಯಲ್ಲಿ ಕಾಲೇಜಿನ ಸಿ ಓ ಓ ಡಾ| ಗೌರಿ ಪ್ರಭು, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಮತ್ತು ‌ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶ್ರೀ ಮಾಧವ ಪೂಜಾರಿಯವರು ಸ್ವಾಗತಿಸಿ, ಕು. ಐಶ್ವರ್ಯ ವಂದಿಸಿದರು. ಕು. ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.