ಉಡುಪಿ:ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸೇವಾ ಕಚೇರಿಯ ಉದ್ಘಾಟನೆ ನೆರವೇರಿಸಿದರು.
ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಂತರಾಮ ಸೂಡ, ಮಾಜಿ ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಇಲ್ಲಿ ಇ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವರು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಹಾಗೂ ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


