ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ 26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು.
ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು ನಾಟಿ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಿಳೆಯರ ಜೀವನವನ್ನು ಹಸನು ಗೊಳಿಸುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ
ಕಳೆದ 20 ವರ್ಷಗಳಿಂದ ನಮ್ಮ ತಾಲೂಕಿನಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸಾಮಾಜಿಕ ನ್ಯಾಯವನ್ನು ಒದಗಿಸುವ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಾ ಬಂದಿದೆ ಎಂದು ತಿಳಿಸಿದರು

ಕ್ಷೇತ್ರ ಯೋಜನಾಧಿಕಾರಿ ಶ್ರೀ ಮಾಧವ ಗೌಡ ರವರು ಮಹಿಳೆಯರಲ್ಲಿ ಕುಟುಂಬ ನಿರ್ವಹಣಾ ಜಾಣ್ಮೆ, ಹಣಕಾಸು ವ್ಯವಹಾರ ಜ್ಞಾನ, ಮಕ್ಕಳ ಶಿಕ್ಷಣ, ಪೌಷ್ಟಿಕ ಆಹಾರ ಮತ್ತು ವೈಯಕ್ತಿಕ ಶುಚಿತ್ವ ಪರಿಸರ ಪ್ರಜ್ಞೆ, ಸ್ವಉದ್ಯೋಗ ನಾಗರಿಕ ಸೌಲಭ್ಯಗಳ ಬಗ್ಗೆ ಬಳಕೆ ಮುಂತಾದ ಗುರಿಗಳನ್ನುನಿರಿಸಿಕೊಂಡು ಯೋಜನೆಯು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು
ಶ್ರೀಮತಿ ಲಕ್ಷ್ಮಿ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪ್ರಾಸ್ತವಿಕ ಮಾತನಾಡಿದರು
ಗ್ರಾಮ ಪಂಚಾಯತಿ ಅಧ್ಯಕ್ಷರು ಸಾವಿತ್ರಿ ಗೋಪಾಲ್ ಅಡ್ಕರ್ ರವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರದಾನವಾಗಿದೆ ಎಂದು ಶುಭ ಹಾರೈಸಿದರು
ವೇದಿಕೆಯಲ್ಲಿ ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದ ಉಪಾಧ್ಯಕ್ಷರು ಮಾಧವ ಕಾಳಮನೆ, ಜಾಲ್ಸುರು ಒಕ್ಕೂಟ ಅಧ್ಯಕ್ಷರಾದ ಗಣೇಶ್ ಅಂಬಾಡಿ ಮೂಲೆ ಹಾಗೂ ಅಂಜನಾದ್ರಿ ಒಕ್ಕೂಟ ಅಧ್ಯಕ್ಷರಾದ ಕೃಷ್ಣಪ್ಪ ನಾಯಕ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶ್ರೀ ಗುರು ರಾಘವೇಂದ್ರ ಜ್ಞಾನವಿಕಾಸ ಸದಸ್ಯರು ಹಾಗೂ ಜಾಲ್ಸುರು & ಅಂಜನಾದ್ರಿ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.
ಶ್ರೀಮತಿ ಜಯಶ್ರೀ ಮೇಲ್ವಿಚಾರಕರು ಸ್ವಾಗತಿಸಿದರು
ಸೇವಾ ಪ್ರತಿನಿಧಿ ಚಂದ್ರಕಲಾ ರವರು ವಂದಿಸಿದರು