HomeFresh Newsಕಾಪು, ಶಿರೂರು ಆಯುಷ್ಮಾನ್ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ

ಕಾಪು, ಶಿರೂರು ಆಯುಷ್ಮಾನ್ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಆಯುಷ್ಮಾನ್ ಆರೋಗ್ಯ ಕೇಂದ್ರ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 06-06-2026 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಅರ್ಚನಾ,ಆಡಳಿತಾಧಿಕಾರಿಗಳಾದ ಸೋಮನಾಥ ಹಾಗೂ ಬೈರಂಪಳ್ಳಿ ಗ್ರಾಮ ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments