ಪ್ರಸಾದ್ ನೇತ್ರಾಲಯದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ ಹಂತಗಳನ್ನು ತಿಳಿಸಿ, ಬಲಿಷ್ಠ ಭಾರತವನ್ನು ಕಟ್ಟಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಸಾದ್ ನೇತ್ರಾಲಯದ ನಿರ್ದೇಶಕರಾದ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲುರವರು ಮಾತನಾಡಿ ಸ್ವಾತಂತ್ರ್ಯ ಸಿಕ್ಕಿದ ಪ್ರಾರಂಭದಲ್ಲಿ ದೇಶ ಎದುರಿಸುವ ಸಮಸ್ಯೆಗಳ ಬಗ್ಗೆ ತಿಳಿಸುತ್ತಾ ಬಂಗಾಳದಲ್ಲಿ ನಡೆದ ಅತ್ಯಾಚಾರದ ಬಗ್ಗೆ ಪ್ರಸ್ತಾಪಿಸಿ, ಭಯಮುಕ್ತವಾಗಿ ಕೆಲಸ ಮಾಡುವ ವಾತಾವರಣ ನಿರ್ಮಾಣವಾದರೆ ಮಾತ್ರ ಸ್ವಾತಂತ್ರೋತ್ಸವದ ಆಚರಣೆಗೆ ಸರಿಯಾದ ಅರ್ಥ ಬರುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ನಿವೃತ್ತ ಡಿ.ಸಿ.ಎಫ್ ಶ್ರೀ ರಘುರಾಮ್ ರಾವ್ ಹಾಗೂ ಶ್ರೀಮತಿ ವೀಣಾ ರಾವ್, ವ್ಯವಸ್ಥಾಪಕ ನಿರ್ದೇಶಕಿಯಾದ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್, ನೇತ್ರ ಜ್ಯೋತಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಪ್ರಸಾದ್ ನೇತ್ರಾಲಯದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು, ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಮಧ್ವ ವಲ್ಲಭ ಆಚಾರ್ಯ ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

add - Haeir

Related Posts

Leave a Reply

Your email address will not be published.