ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಪ್ರಪ್ರಥಮ ಬಾರಿಗೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆವರಿಸಲಾಯಿತು.

ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವು ಪ್ರತಿಯೊಬ್ಬರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ ಆಲೂರು, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಉಪ ನಿರ್ವಹಣಾಧಿಕಾರಿ ಐ. ಎಚ್ ತುಂಬಿಗೆ, ಮಾಜಿ ಜಿಲ್ಲಾ ಪಂಚದಸ್ಯರಾದ ಗೌರಿ ದೇವಾಡಿಗ, ದೇವಸ್ಥಾನ ಸಿಬ್ಬಂದಿ ವರ್ಗ, ಅರ್ಚಕರು, ಭಕ್ತವೃಂದ ಮತ್ತು ಊರವರು, ಶಿಕ್ಷಕ – ಶಿಕ್ಷಕೇತರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಸುಕೇಶ್ ಶೆಟ್ಟಿ ಹೊಸಮಠ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ನಿರೂಪಿಸಿ ವಂದಿಸಿದರು.
