ಮಹಾ ಕುಂಭ ಮೇಳದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪವಿತ್ರ ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ ಮೇಳದಲ್ಲಿ ಅನಾವರಣ ಗೊಳಿಸಲಾಯಿತು.


ಈ ಸಂಧರ್ಭದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಬೇಕು ಸಮಾಜಕ್ಕೆ ಒಳ್ಳೆಯದಾಗಬೇಕು ಸರ್ವೇ ಜನಾಃ ಸುಖಿನೋ ಭವಂತು ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಗೆಜ್ಜೆಗಿರಿ ಜಾತ್ರಾ ಮಹೋತ್ಸವಕ್ಕೆ ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಸರ್ವ ಭಕ್ತಭಿಮಾನಿಗಳು ಅಗಮಿಸ ಬೇಕೆಂದು ಡಾ. ರವಿ ಕಕ್ಕೆಪದವು ವಿನಂತಿಸಿದರು.