HomeFresh Newsಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ ‘ಉತ್ತಮ ವಿದ್ಯಾರ್ಥಿ ಪ್ರಶಸ್ತಿ’

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ ‘ಉತ್ತಮ ವಿದ್ಯಾರ್ಥಿ ಪ್ರಶಸ್ತಿ’

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿ ತೇಜಸ್ ನಾಯಕ್ ಅವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2026ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ತೇಜಸ್ ನಾಯಕ್ ಅವರು ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಆಗಸ್ಟ್ 19ರಂದು ಬೀದರ್‌ನ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ 22ನೇ ಕರ್ನಾಟಕ ರಾಜ್ಯ ಮಟ್ಟದ ಐಎಸ್‌ಟಿಇ ವಿದ್ಯಾರ್ಥಿ ಸಮ್ಮೇಳನದಲ್ಲಿ ತೇಜಸ್ ನಾಯಕ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಪ್ರತಿಷ್ಠಿತ ಪ್ರಶಸ್ತಿ ದೊರೆತಿರುವುದಕ್ಕೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿ, ತೇಜಸ್ ನಾಯಕ್ ಅವರನ್ನು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments