ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ. ಬಿಜೆಪಿ ಒಳಗೆ ಸಾಕಷ್ಟು ಜನ ನೊಂದಿದ್ದಾರೆ ಸಂಕಟಪಡುತ್ತಿದ್ದಾರೆ. ಬಿಜೆಪಿಯನ್ನು ಬಿಟ್ಟು ಹೊರಗೆ ಬರಲು ಬಹಳಷ್ಟು ಜನ ತಯಾರಾಗಿದ್ದಾರೆ. ನನಗೆ ಬಿಜೆಪಿ ಹೈಕಮಾಂಡ್‍ನಿಂದ ಯಾವುದೇ ಕರೆ ಬಂದಿಲ್ಲ. ಕರೆ ಬಾರದೆ ಈ ಎಲ್ಲಾ ಚರ್ಚೆಗಳು ಯಾಕೆ. ಕರೆ ಮಾಡಿದರೆ ನಾನು ಮಾಧ್ಯಮಗಳಿಗೆ ತಿಳಿಸುತ್ತೇನೆ ಎಂದರು.