ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ
ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.
ಬಿಜೆಪಿಯಲ್ಲಿ ಶಾಸಕ, ಮಂತ್ರಿ, ಮುಖ್ಯಮಂತ್ರಿ ಎಂದು ನಾನಾ ಅಧಿಕಾರ ಅನುಭವಿಸಿದ್ದ ಜಗದೀಶ್ ಶೆಟ್ಟರ್ ಪಕ್ಕಾ ಸಂಘ ಪರಿವಾರದ ಹಿನ್ನೆಲೆಯವರು. ರಾಜಕೀಯ ಕಾರಣಕ್ಕೆ ಕಾಂಗ್ರೆಸ್ಸಿಗೆ ಬಂದಿದ್ದ ಅವರಿಗೆ ಕಾಂಗ್ರೆಸ್ಸಿನಲ್ಲಿ ಹೊಂದಾಣಿಕೆ ಸಾಧ್ಯವಾಗಿಲ್ಲ ಎನ್ನಬಹುದು. ಮಂತ್ರಿ ಮಾಡಿದ್ದರೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದರೋ ಏನೋ. ಈಗ ಮತ್ತೆ ಮೋದಿಯವರನ್ನು ಪ್ರಧಾನಿಯಾಗಿ ನೋಡಲು ತಾನು ಬಿಜೆಪಿಗೆ ಹಿಂತಿರುಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ, ಕರ್ನಾಟಕದ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪರ ಸಮ್ಮುಖದಲ್ಲಿ ಶೆಟ್ಟರ್ ಮತ್ತೆ ಬಿಜೆಪಿ ಆದರು ಎನ್ನಲಾಗಿದೆ.