HomeFresh Newsಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆ

ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ. ಜೆಸಿಐ ಬಂಟ್ವಾಳದ ಅಧ್ಯಕ್ಷ ರೋಷನ್‌ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನೂತನ ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್ ಹಾಗೂ ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್, ಕಿರಣ್, ಮನೋಜ್ ಕನಪಾಡಿ, ವಚನ್ ಶೆಟ್ಟಿ, ಕಿಶೋರ್ ಆಚಾರ್ಯ, ವಿದ್ಯಾ ಉಮೇಶ್, ಜೆಜೆಸಿ ಸಂಯೋಜಕರಾಗಿ ಲೋಕೇಶ್ ಸುವರ್ಣ, ಮಹಿಳಾ ಜೆಸಿ ಸಂಯೋಜಕಿಯಾಗಿ ದೀಪ್ತಿ ರೋಷನ್ ರೈ, ಜೆಜೆಸಿ ಅಧ್ಯಕ್ಷರಾಗಿ ಜಯರಾಜ್ ಆಯ್ಕೆಗೊಂಡರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments