ಬಜಪೆ : ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಭೇಟಿ
ಸುಂಕದಕಟ್ಟೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಶಕ್ತಿ ತುಂಬಿದರು.. ಹೆಚ್.ಡಿ.ದೇವೇಗೌಡರು ಸುಂಕದಕಟ್ಟೆ ಬಜಪೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಜೊತೆಗೆ ಮಂಗಳೂರು ಉತ್ತರ ಅಭ್ಯರ್ಥಿ ಮೊಯ್ದೀನ್ ಭಾವ ಮತ್ತು ಮಂಗಳೂರು ಕೇಂದ್ರ ಅಭ್ಯರ್ಥಿ ಸುಮತಿ ಹೆಗ್ಡೆ, ಗಣೇಶ್ ಉಡುಪ, ಫರಾಕ್ ಅಬ್ದುಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು ದೇವಸ್ಥಾನದ ಧರ್ಮದರ್ಶಿ ಶ್ರೀ ನಾರಾಯಣ ಪೂಜಾರಿ ಹಾಗೂ ಶ್ರೀಮತಿ ಜ್ಯೋತಿ ನಾರಾಯಣ ಪೂಜಾರಿ ಸ್ವಾಗತಿಸಿದರು