HomeFresh Newsಜೆಪ್ಪು : ನಾಲ್ಕು ವಾಹನಗಳ ಸರಣಿ ಅಪಘಾತ - ಪ್ರಯಾಣಿಕರು ಪಾರು

ಜೆಪ್ಪು : ನಾಲ್ಕು ವಾಹನಗಳ ಸರಣಿ ಅಪಘಾತ – ಪ್ರಯಾಣಿಕರು ಪಾರು

ಉಳ್ಳಾಲ: ಕಾರು ಚಾಲಕನೊರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಇತರ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲಿ ನಡೆದಿದ್ದು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದಾಗ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಕಾರು ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆಯುವ ಸಂದರ್ಭವೇ ಅದರ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಇತರ ವಾಹನಗಳಲ್ಲಿದ್ದ ಐದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments