ಮಂಗಳೂರು: ಜುಲೈ 30ರಂದು ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಕಾಲೇಜಿನಲ್ಲಿ ಜುಲೈ 30 ರಂದು ಉದ್ಯೋಗ ಮೇಳೆವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|.ಡಾ| ಮೈಕಲ್ ಸಾಂತುಮಯೋರ್ ಅವರು ತಿಳಿಸಿದ್ದಾರೆ.
ಜುಲೈ 30ರಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಯಾವುದೇ ನೋಂದಣಿ ಶುಲ್ಕವಿಲ್ಲದೆ ಅಭ್ಯರ್ಥಿಗಳು ಭಾಗವಹಿಸಲು ಅವಕಾಶವಿದೆ.
ಅಜಿತ್ ಎಂಟರ್‌ಪ್ರೈಸಸ್, ಸಿ.ಐ.ಐ ಮಂಗಳೂರು ಮತ್ತು ವ್ಯವಸ್ಥಾಪಕ ನಿದೇರ್ಶಕರು, ಹಾಗೂ ಉಪಾಧ್ಯಕ್ಷರಾದ ಅಜಿತ್ ಕಾಮತ್‌ರವರು ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಸಂಚಾಲಕರಾದ ವಂ|.ಫಾ| ಬೊನವೆಂಚರ್ ನಜರೆತ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯೋಗ ಮೇಳದಲ್ಲಿ ಸುಮಾರು 60ಕಂಪನಿಗಳು ಭಾಗವಹಿಸಲಿದ್ದು, 2,500 ರಷ್ಟು ಉದ್ಯೋಗವಕಾಶವನ್ನು ಒದಗಿಸಲಿದೆ. ಪದವಿ ಸ್ನಾತಕೊತ್ತರ ಪದವಿ, ಎಂಜಿನಿಯರಿಂಗ್, ಐಟಿಐ, ಡಿಪ್ಲೋಮಾ, ಹೋಟೇಲ್ ಮ್ಯಾನೇಜ್‌ಮೆಂಟ್ ಶಿಕ್ಷಣ ಪಡೆದ ಅಭ್ಯರ್ಥಿಗಳು ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಸ್ವ ವಿವರ ಪ್ರತಿಗಳು, ಸೂಕ್ತ ದಾಖಲೆಗಳೊಂದಿಗೆ ಹಾಜರಾಗಬಹುದು ಎಂದು ತಿಳಿಸಿದ್ದಾರೆ. ಮಂಗಳೂರಿಗರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಇದರ ಸದುಪಯೋಗಪಡಿಸಿಕೊಳ್ಳಬಹುದು.