ವಿಟ್ಲದಲ್ಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

ಭಾರತದಲ್ಲಿ ಕಾಂಗ್ರೆಸ್ ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ. ಕರ್ನಾಟಕದಲ್ಲಿ ಮಾಡಿದ ಕೆಲಸ ಕಾರ್ಯದ ಹಿನ್ನಲೆಯಲ್ಲಿ ಅದರ ಪ್ರಚಾರಕ್ಕೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಹೋಗುತ್ತಿದ್ದು, ಬಿಜೆಪಿ ಡಬ್ಬಲ್ ಇಂಜಿನ್ ನಲ್ಲಿ ಹೋಗುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಅವರು ವಿಟ್ಲ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿ, ಜೈನ ಬಸದಿ ಸಮೀಪದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮಾತನಾಡಿ ಕಾರ್ಯಕರ್ತರ ಶ್ರಮದಿಂದ ಗೆಲವು ಸಾಧಿಸಲಾಗಿದೆ. ಅಪಪ್ರಚಾರಗಳಿಗೆ ಕಿವಿ ಕೊಡದೆ ಪಕ್ಷ ಮುಖ್ಯ ಎಂದು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬುಡಿಯಾರು ರಾಧಾಕೃಷ್ಣ ರೈ, ರಾಷ್ಟೀಯ ಮಹಿಳಾ ಮೋರ್ಚಾದ ಸದಸ್ಯೆ ಬಿಂದು ಸರೇಶ್, ರೈತ ಮೋರ್ಚಾ ಕಾರ್ಯದರ್ಶಿ ರೇಣುಕಾ ಪ್ರಸಾದ್, ಸಹಜ್ ರೈ, ನವೀನ್ ಪಡ್ನೂರು, ಸುನಿಲ್ ದಡ್ಡ, ಕಿಶೋರ್ ಕೊಟ್ಯಾಡಿ, ಮೀನಾಕ್ಷೀ ಶಾಂತಿಗೋಡು, ಕೆ.ಟಿ. ಶೈಲಜಾ ಭಟ್, ಯಶನ್ವಿನಿ ಶಾಸ್ತ್ರೀ ಮತ್ತಿತರರು ಉಪಸ್ಥಿತರಿದ್ದರು.
ವಿಟ್ಲ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ ಸ್ವಾಗತಿಸಿದರು. ಮೋಹನದಾಸ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು. ರವಿಪ್ರಕಾಶ್ ವಿಟ್ಲ ವಂದಿಸಿದರು.
