HomeFresh Newsರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ.ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments