ಕಡಬದಲ್ಲಿ ಸಚಿವ ಎಸ್. ಅಂಗಾರ ಅವರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು 5.15 ಕೋಟಿ ರೂ.ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 2.74 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.
