ಕಡಬ ; ಬೆಂಗಳೂರಿನಿಂದ ರಜೆಯಲ್ಲಿ ಬಂದಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣ ಸಾವು
ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಷಿತ (14 ವರ್ಷ) ಮತ್ತು ಅವಂತಿಕಾ (10 ವರ್ಷ) ಎಂದು ಗುರುತಿಸಲಾಗಿದೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ, ಸ್ಥಳೀಯರ ಸಹಕಾರದಿಂದ ಇಬ್ಬರ ಮೃತ ದೇಹ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ ಅವರು ತನ್ನ ಅಣ್ಣನ ಮನೆಗೆ ಬಂದಿದ್ದ ವೇಳೆ ಮಕ್ಕಳು ಸ್ನಾನಕ್ಕೆಂದು ನದಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.