ಕಡಬ : ವಿದ್ಯುತ್ ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‍ಮ್ಯಾನ್ ಸಾವು
ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್‍ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ